ನಿತ್ಯವಾಣಿ, ಬೆಂಗಳೂರು, (ಮೇ. 13) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಜೂನ್ 21 ಕ್ಕೆ ನಿಗದಿಯಾಗಿದ್ದ ಎಸ್. ಎಸ್. ಎಲ್. ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮುಂದೂಡಿದ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.