ಚಿತ್ರದುರ್ಗಕ್ಕೆ ಸಚಿವರ ಸ್ಥಾನ….!

 

ಚಿತ್ರದುರ್ಗಕ್ಕೆ ಸಚಿವರ ಸ್ಥಾನ      ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಒಲಿಯಲಿದೆ ಸಚಿವರ ಪಟ್ಟಿಯಲ್ಲಿ ಶಾಸಕಿ ಯ  ಹೆಸರು ಸೂಚನೆ ಇದೆ

: ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದವಾಗಿದ್ದು ಬುಧವಾರ (ಜ.13) ಸಂಜೆ ನಾಲ್ಕು ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆ ನಾಲ್ಕು ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ನೂತನ ಸಚಿವರ ಪಟ್ಟಿ ನಾಳೆ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು.

ಕಳೆದ ರವಿವಾರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದರು.

ಏಳು ಜನರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಎಸ್ ವೈ ಹೇಳಿದ್ದರು. ಇದಾದ ಬಳಿಕ ಬಾರಿ ಸಚಿವಗಿರಿಗಾಗಿ ಲಾಬಿ ನಡೆಯುತ್ತಿದ್ದು, ಸಂಪುಟ ವಿಸ್ತರಣೆಯೋ ಅಥವಾ ಪನರಚನೆಯೋ ಎನ್ನುವ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ.

ಬಿಜೆಪಿ ಸರ್ಕಾರ ರಚನೆಗೆ ಸಹಾಯಕವಾದ ಮುನಿರತ್ನ, ಆರ್. ಶಂಕರ್, ಎಂಟಿಬಿ ನಾಗರಾಜ್ ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.

Leave a Reply

Your email address will not be published.