ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಚಿತ್ರದುರ್ಗ ನಗರದಲ್ಲಿ ಸಂಪೂರ್ಣ ವಿಫಲವಾಗಿ, ಪ್ರತಿಭಟನೆಗಷ್ಟೇ ಸೀಮಿತವಾಯಿತು.ಚಿತ್ರದುರ್ಗ ನಗರದಲ್ಲಿ ಜನಜೀವನ ಸಹಜಸ್ಥಿತಿಯಲ್ಲಿದೆ. ನಗರದ ಸಂತೇಪೇಟೆ ವೃತ್ತದಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆಯ ಕಾವು ಹೆಚ್ಚಿಸಲು ಪ್ರಯತ್ನಿಸಿದರು. ಆದರೆ ಬೆಳ್ಳಂಬೆಳಿಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಪೆÇಲೀಸರು ಬಂದ್ ವಿಫಲಗೊಳಿಸಿದ್ದಾರೆ.ಅಂಗಡಿ ಮುಂಗಟ್ಟುಗಳು, ಹೊಟೇಲ್‍ಗಳು, ಪೆಟ್ರೋಲ್ ಬಂಕ್ ಗಳು ಎಂದಿನಂತೆ ತೆರೆದಿವೆ. ಕೆಎಸ್‍ಆರ್ ಟಿಸಿ ಹಾಗೂ ಖಾಸಗಿ ಬಸ್ ಸಂಚಾರ ಎಂದಿನಂತಿದೆ. ಆಟೋ, ಇನ್ನಿತರ ವಾಹನ ಸಂಚಾರ ಮಾಮೂಲಿನಂತಿದೆ. ಜನ ಸಂಚಾರಕ್ಕೂ ಯಾವುದೇ ರೀತಿಯ ತೊಂದರೆಯುಂಟಾಗಿಲ್ಲ.ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ. ಕನ್ನಡ ಸಂಘಟನೆಗಳು ಹೊರತಪಡಿಸಿದರೆ ಇತರೆ ಯಾವುದೇ ಸಂಘ ಸಂಸ್ಥೆಗಳು ಬಂದ್‍ಗೆ ಬೆಂಬಲ ಸೂಚಿಸಿರಲಿಲ್ಲ. ಅಲ್ಲದೆ ಬೆಳಿಗ್ಗೆಯೇ ಕನ್ನಡ ಕಾರ್ಯಕರ್ತರನ್ನು ಬಂಧಿಸಿದ್ದರಿಂದ ಬಂದ್‍ಗೆ ಹಿನ್ನಡೆಯುಂಟಾಯಿತು.ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿದ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬಳಿಕ ಡಿಸಿ ಕಚೇರಿ ವೃತ್ತದಲ್ಲಿ ಜಮಾಯಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಎಂಇಎಸ್ ಅನ್ನು ಮೆಚ್ಚಿಸಲು ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸುವುದು ಕನ್ನಡಿಗರಿಗೆ ಮಾಡುವ ಮೋಸ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೆಳಿಗ್ಗೆಯಿಂದ ಜಿಲ್ಲೆಯ ಪ್ರಮುಖ ನಗರ ಪಟ್ಟಣಗಳಲ್ಲಿ ಬಂದ್‍ನ ಯಾವುದೇ ಬಿಸಿ ತಟ್ಟಲಿಲ್ಲ. ಎಲ್ಲೆಡೆ ಆಟೋ ಚಾಲಕರು ಕರ್ನಾಟಕ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಆಟೋ ಚಾಲಕರು ಸಹ ಬೆಂಬಲ ವ್ಯಕ್ತಪಡಿಸಲಿಲ್ಲ. ಇನ್ನು ಕೆಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ಗಳ ಸಂಚಾರ ಕೂಡ ಎಂದಿನಂತೆ ಇತ್ತು. ವ್ಯಾಪಾರ ವಹಿವಾಟುಗಳು ಎಂದಿನಂತೆ ನಡೆದವು.ಒಟ್ಟಿನಲ್ಲಿ ಮರಾಠ ಅಭಿವೃದ್ಧಿ ನಿಗಮವನ್ನು ವಿರೋಧಿಸಿ ಕೊಡಗಿನಲ್ಲಿ ಯಾವುದೇ ಬಂದ್ ನಡೆಯದಿದ್ದರೂ ವಿವಿಧ ರಕ್ಷಣಾ ವೇದಿಕೆಯ ಬಣದ ಕಾರ್ಯಕರ್ತರು ಪ್ರತಿಭಟನೆ ಆಕ್ರೋಶ ಸರ್ಕಾರದ ವಿರುದ್ಧ ವ್ಯಕ್ತಪಡಿಸಿದರು.