ನಿತ್ಯವಾಣಿ, ಚಿತ್ರದುರ್ಗ,ಜೂನ್07 : ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಜೂನ್ 08ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಜೂನ್ 08ರಂದು ಸಚಿವರು ದಾವಣಗೆರೆಯಿಂದ ಮಧ್ಯಾಹ್ನ 1ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಸಚಿವರು ಅದೇ ದಿನ ಮಧ್ಯಾಹ್ನ 2.30ಕ್ಕೆ ತುಮಕೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.