ಹೊಸದುರ್ಗ ಪಟ್ಟಣದ ಹಳೇ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರ ಕೇಂದ್ರ ಪುರಸ್ಕøತ ಯೋಜನೆಯಡಿ ಮೇಲ್ದರ್ಜೆಗೇರಿಸಲ್ಪಟ್ಟ ಹೊಸದುರ್ಗ ಸರ್ಕಾರಿ ಆಯುಷ್ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್ ಭೂಮಿ ಪೂಜೆ ನೆರವೇರಿಸಿದರು.
ಕೆಆರ್‍ಡಿಐಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಮಾಹಿತಿ ನೀಡಿ, ಹೊಸದುರ್ಗ ಸರ್ಕಾರಿ ಆಯುಷ್ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಲ್ಲಿ ರೂ.56.25 ಲಕ್ಷಗಳಿಗೆ ಮಂಜೂರಾತಿ ದೊರೆತಿದ್ದು, ಭಾನುವಾರದಿಂದಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್ ಮಾತನಾಡಿ, ಸರ್ಕಾರಿ ಆಯುಷ್ ಆಸ್ಪತ್ರೆಯು ಆಯುರ್ವೇದ ಮತ್ತು ಹೋಮಿಯೋಪತಿ ವಿಭಾಗಗಳನ್ನು ಒಳಗೊಂಡಿದ್ದು, ಪಂಚಕರ್ಮ ಚಿಕಿತ್ಸೆಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶ ಹೊಂದಿದೆ. ಇದರೊಂದಿಗೆ ಹೊಸದುರ್ಗ ತಾಲ್ಲೂಕಿನಲ್ಲಿ ಮೊಟ್ಟ ಮೊದಲ ಆಯುಷ್ ಆಸ್ಪತ್ರೆ ಪ್ರಾರಂಭವಾಗುತ್ತಿರುವ ಹೆಗ್ಗಳಿಕೆಯ ಸಂಗತಿಯಾಗಿದೆ ಎಂದು ಹೇಳಿದರು.
ಭೂಮಿ ಪೂಜೆ ಸಮಾರಂಭದಲ್ಲಿ ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್, ಕೆಆರ್‍ಡಿಐಎಲ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಉಮೇಶ್ ಸೇರಿದಂತೆ ಆಯುಷ್ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಫೋಟೋ ವಿವರ: ಹೊಸದುರ್ಗ ಪಟ್ಟಣದ ಹಳೇ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರ ಕೇಂದ್ರ ಪುರಸ್ಕøತ ಯೋಜನೆಯಡಿ ಮೇಲ್ದರ್ಜೆಗೇರಿಸಲ್ಪಟ್ಟ ಹೊಸದುರ್ಗ ಸರ್ಕಾರಿ ಆಯುಷ್ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಗೂಳಿಹಟ್ಟಿ ಡಿ.ಶೇಖರ್ ಭೂಮಿ ಪೂಜೆ ನೆರವೇರಿಸಿದರು.