BIG NEWS: ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ

BIG NEWS: ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯವಾಗಲು ಬಿಡಲ್ಲ. ವರಿಷ್ಠರೊಂದಿಗೆ ಚರ್ಚಿಸಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗುವುದು ಎಂದು ತಮ್ಮನ್ನು ಭೇಟಿಯಾದ ಶಾಸಕರ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದು ವಿಳಂಬವಾದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅವಕಾಶ ನೀಡಬೇಕೆಂದು ಶಾಸಕರು ಹೇಳಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೂಡಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಹೇಳಲಾಗಿದ್ದು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.

Leave a Reply

Your email address will not be published.