ಚಿತ್ರದುರ್ಗ,ನಿತ್ಯವಾಣಿ,ಏ.4 ;ಅಖಿಲ ಭಾರತ ವೀರಶೈವ ಮಹಾಸಭಾ ಚಳ್ಳಕೆರೆ ತಾಲೂಕು ಘಟಕದಿಂದ ಡಾ. ಶಿವಕುಮಾರ ಸ್ವಾಮೀಜಿಯವರ 114ನೇ ವರ್ಷದ ಜನ್ಮದಿನ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಚಳ್ಳಕೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ನಿರ್ದೇಶಕರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯ ನಿರ್ಮಲ ಕನ್ವೆನ್ಷನ್ ಹಾಲ್ ನಲ್ಲಿ ಜರಗಿತು. ಈ ಸಂದರ್ಭದಲ್ಲಿ ಪ್ರಮೀಳಾ ಜಗದೀಶ್ ಅವರನ್ನು ಹಾಗೂ ಇನ್ನುಳಿದ ನಿರ್ದೇಶಕರನ್ನು ಸನ್ಮಾನಿಸಲಾಯಿತು. ವೀರಶೈವ ಮಹಾಸಭಾ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಮಹಡಿ ಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ರವಿಕುಮಾರ್, ಶ್ಯಾಮಲಾ ಶಿವಪ್ರಕಾಶ್, ಆರತಿ ಮಹಡಿ ಶಿವಮೂರ್ತಿ ಇನ್ನುಳಿದ ಮುಖಂಡರು ಹಾಜರಿದ್ದರು