ರಾಯಚೂರು: ಕಾಂಗ್ರೆಸ್ ಎಲ್ಲೇ ಹೋದ್ರು ಸೋಲೋದು ಖಚಿತ. ಕೈ ನಾಯಕರಿಗೆ ನಡುಕ ಶುರುವಾಗಿದ್ದು, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದಲ್ಲಿ ಉಪಚುನಾವಣೆ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಸಚಿವರು, ‘ರಾಜ್ಯದ ಕಾಂಗ್ರೆಸ್ ನಾಯಕರಿಗೆ ನಡುಕ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ನೀವು ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನ ಗೆಲ್ಲಿಸಬೇಕು’ ಎಂದರು.