ರೆಡ್ಡಿಸಮುದಾಯ ಭವನದಲ್ಲಿ ಜನಸೇವಕ್ ಸಮಾವೇಶ ::ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ

 

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯಾದ್ಯಂತ ಐದು ತಂಡಗಳು ಸಂಚರಿಸಿದ ಫಲವಾಗಿ ಬಿಜೆಪಿ.ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದರಿಂದ ಜ.12 ರಂದು ಬೆಳಿಗ್ಗೆ 11 ಕ್ಕೆ ತುರುವನೂರು ರಸ್ತೆಯಲ್ಲಿರುವ ರೆಡ್ಡಿಸಮುದಾಯ ಭವನದಲ್ಲಿ ಜನಸೇವಕ್ ಸಮಾವೇಶ ನಡೆಸಲಾಗುವುದೆಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.

ಬಿಜೆಪಿ.ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಾದ್ಯಂತ 3421 ಕ್ಷೇತ್ರಗಳಲ್ಲಿ 1956 ಬಿಜೆಪಿ.ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿದ್ದು, ಇದಕ್ಕೆ ಜಿಲ್ಲೆಯ ಐವರು ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಕಾರ್ಯದರ್ಶಿ ನವೀನ್ ಮತ್ತು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಪರಿಶ್ರಮ ಕಾರಣವಾಗಿರುವುದರಿಂದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಕ್ಕಾಗಿ ಜನ ಸೇವಕ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಚುನಾಯಿತ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸದಸ್ಯರುಗಳು ಜನ ಸೇವಕ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವಥ್‍ನಾರಾಯಣ, ಲಕ್ಷ್ಮಣ ಸವಧಿ, ಗೃಹ ಸಚಿವ ಬಸವರಾಜ್‍ಬೊಮ್ಮಾಯಿ, ಶೋಭ ಕರಂದ್ಲಾಜೆ, ಮಹಿಳಾ ಮೋರ್ಚ ರಾಜ್ಯಾಧ್ಯಕ್ಷೆ ಗೀತ ಇನ್ನು ಅನೇಕ ಮುಖಂಡರುಗಳು ಆಗಮಿಸಲಿದ್ದಾರೆ. ಐದು ಸಾವಿರ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು, ಗ್ರಾಮ ಪಂಚಾಯಿತಿಯಲ್ಲಿ ಗೆದ್ದಿರುವವರು ಆಡಳಿತ ಹೇಗೆ ನಡೆಸಬೇಕು ಎನ್ನುವ ಕುರಿತು ಸಮಾವೇಶದಲ್ಲಿ ತಿಳಿಸಲಾಗುವುದೆಂದರು.

ಜಿಲ್ಲೆ ಹಾಗೂ ಮಂಡಲ ಮೋರ್ಚ ಪದಾಧಿಕಾರಿಗಳು ಜನ ಸೇವಕ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಅದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಗೆದ್ದಿದ್ದಾರೆಂದು ಆ ಪಕ್ಷದವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅದಕ್ಕೆ ಯಾರು ಕಿವಿಗೊಡಬಾರದೆಂದು ಎ.ಮುರಳಿ ಮನವಿ ಮಾಡಿದರು.

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲ್, ಸುರೇಶ್‍ಸಿದ್ದಾಪುರ, ಓ.ಬಿ.ಸಿ.ರಾಜ್ಯ ಉಪಾಧ್ಯಕ್ಷ ಸಿದ್ದೇಶ್‍ಯಾದವ್, ನಗರಾಧ್ಯಕ್ಷ ಶಶಿಧರ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರ

Leave a Reply

Your email address will not be published.