ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್

ಬೆಂಗಳೂರು: ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಪತಿಯ ವಿರುದ್ಧ ಪತ್ನಿಯೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಫ್ರೆಜರ್‌ಟೌನ್‌ ನಿವಾಸಿ 39 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಪುಲಕೇಶಿನಗರ ಪೊಲೀಸರು ಆರೋಪಿ ಪತಿ ರಾಜು ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸೆರೆ ಹಿಡಿದು ಬೇರೆಯವರಿಗೆ ಕಳಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ:
ಸಂತ್ರಸ್ತೆ 2019ರಲ್ಲಿ ರಾಜು ಎಂಬಾತನನ್ನು ಮದುವೆಯಾಗಿದ್ದು, ಅತ್ತಿಗುಪ್ಪೆಯ ಇಂದಿರಾ ಕಾಲೋನಿಯಲ್ಲಿ ವಾಸವಾಗಿದ್ದರು. ಆರಂಭದಲ್ಲಿ ದಂಪತಿ ಅನ್ಯೂನ್ಯವಾಗಿದ್ದರು. ಅನಂತರ ಪತಿ ರಾಜು ನಿತ್ಯ ಕುಡಿದು ಬಂದು ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸುತ್ತಿದ್ದ. ಪತಿಯ ಕಿರುಕುಳವನ್ನು ಸಿಹಿಸಿಕೊಂಡು ಮಹಿಳೆ ಜೀವನ ಮಾಡುತ್ತಿದ್ದರು. ಆದರೆ, ಪರಪುರುಷನ ಜತೆ ಅಕ್ರಮ ಸಂಬಂಧ ಇಟ್ಟು ಕೊಂಡಿರುವುದಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಕೆಯ ಸಹೋದ್ಯೋಗಿಗಳಿಗೆ ಕರೆ ಮಾಡಿ “ನನ್ನ ಪತ್ನಿಗೆ ನಿಮಗೂ ಏನು ಸಂಬಂಧ’ ಎಂದು ಕೇಳುತ್ತಿದ್ದ. ಅಲ್ಲದೆ, ತನ್ನ ಮೊಬೈಲ್‌ನಲ್ಲಿ ಪತ್ನಿಯ ಅಶ್ಲೀಲ ಫೋಟೋ, ವಿಡಿಯೋಗಳನ್ನು ಸೆರೆ ಹಿಡಿದು ಇತರರಿಗೆ ಕಳುಹಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

Leave a Reply

Your email address will not be published.