ಚಿತ್ರದುರ್ಗ, ನಿತ್ಯವಾಣಿ, (ಏ. 24) : ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ದರ್ಶನಾಶೀರ್ವಾದ ಪಡೆದ ಕಂದಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ.
ಗುರುಪೀಠಕ್ಕೆ ಭೇಟಿ ನೀಡಿದ ಮಂಜುನಾಥ ಪ್ರಸಾದ ಮಾತನಾಡಿ ದಲಿತ ಕೇರಿ, ಹಟ್ಟಿ ತಾಂಡಾ ಹಾಗೂ ಮಠಗಳ ಅಭಿವೃದ್ಧಿ ಆಗುವುದು ಅವಶ್ಯಕತೆಯಿದೆ. ಇದಕ್ಕೆ ಸರ್ಕಾರದ ಅನೇಕ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿರ್ದೇಶನ ನೀಡಿದೆ ಎಂದರು.
ಗ್ರಾಮ ಪಂಚಾಯಿತಿ ಅಕೌಂಟೆಂಟ್ ಒಕ್ಕೂಟದ ಸದಸ್ಯರು ಭೇಟಿ ಪದೋನ್ನತ್ತಿ ಕುರಿತು ಮನವಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀಗಳು ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಗೌರವ ಸಮರ್ಪಣೆ ಮಾಡಿದರು.