ನಿತ್ಯವಾಣಿ,ಚಿತ್ರದುರ್ಗ,(ಜೂನ್14 ): ವಿಶ್ವ ರಕ್ತದಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಾವೇ ಸ್ವತಃ ರಕ್ತದಾನ ಮಾಡುವ ಮೂಲಕ ಸ್ವಯಪ್ರೇರಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ನಗರದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ ಹಾಗೂ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ರಕ್ತದಾನ ಮಾಡುವ ಮೂಲಕ ಮಾದರಿಯಾದರು.

ನಂತರ ಮಾತನಾಡಿದ ಅವರು, ರಕ್ತದಾನ ಮಾಡಿದರೆ ಒಂದು ಜೀವ ಉಳಿಸಿದ ಶ್ರೇಷ್ಟ ಕೆಲಸ ನಮ್ಮದಾಗುತ್ತದೆ. ರಕ್ತದಾನ ಮಾಡುವ ಮೂಲಕ ಇತರರ ಜೀವ ಉಳಿಸುವ ಕೆಲಸ ಮಾಡಬೇಕು. ಎಲ್ಲರೂ ರಕ್ತದಾನ ಮಾಡುವ ಮಾದರಿಯಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಕ್ತದಾನ ಮಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಮಹೇಂದ್ರನಾಥ್, ಕಾರ್ಯದರ್ಶಿ ಮಜರುಲ್ಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಸುದ್ದಿಗಾಗಿ, ಜಾಹೀರಾತಿಗಾಗಿ ,👉ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್ ಟಿ ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020 www.nithyavaninews.com
ReplyForward
|