ಅತೃಪ್ತ ಶಾಸಕರಿಗೆ ಸಿಎಂ ‘BSY ‘ಬುಲಾವ್

ಬೆಂಗಳೂರು: ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಲಾವ್ ನೀಡಿದ್ದು, ತಕ್ಷಣವೇ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ 10 ಕ್ಕೂ ಹೆಚ್ಚು ಶಾಸಕರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದು ತಕ್ಷಣವೇ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ನಂತರದಲ್ಲಿ ಪರಿಸ್ಥಿತಿ ತಣ್ಣಗಾದಂತೆ ಇದ್ದರೂ ಅಸಮಾಧಾನಿತ ಶಾಸಕರು ಪ್ರತ್ಯೇಕ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆ ಹಿನ್ನಲೆಯಲ್ಲಿ ಪರಿಸ್ಥಿತಿ ಕೈ ಮೀರುವ ಮೊದಲೇ ಅಸಮಾಧಾನ ಶಮನಕ್ಕೆ ಮುಂದಾದ ಸಿಎಂ ಅತೃಪ್ತ ಶಾಸಕರಿಗೆ ಬುಲಾವ್ ನೀಡಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published.