ಸ್ಯಾಂಡಲ್ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಬುಲಾವ್ ನೀಡಿದೆ.
ಹೌದು, ಪ್ರಕರಣದ ಸಂಬಂಧ ಮತ್ತಷ್ಟು ಮಾಹಿತಿ ಪಡೆಯಲು ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಬುಲಾವ್ ನೀಡಿದೆ.
ಇಂದ್ರಜಿತ್ ಲಂಕೇಶ್ ಡ್ರಗ್ ಬಾಂಬ್ ಸಿಡಿಸಿದ ಬಳಿಕ ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಈಗಾಗಲೇ ತೀವ್ರ ವಿಚಾರಣೆ ನಡೆಸಿದೆ., ಈಗಾಗಲೇ ಕೆಲವು ನಟ ನಟಿಯರನ್ನು ಸಿಸಿಬಿ ವಿಚಾರಣೆ ನಡೆಸಿದೆ.
ಸ್ಯಾಂಡಲ್ವುಡ್ ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ದಿನದಿಂದ ದಿನಕ್ಕೆ ಹಲವು ಹೆಸರುಗಳು ಕೇಳಿಬರುತ್ತಿದೆ, ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡದ ಜನಪ್ರಿಯ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಗರ್ಲಾನಿ ಪರಪ್ಪನ ಅಗ್ರಹಾಸ ಸೇರಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ. ಇನ್ನೊಂದೆಡೆ ಜನಪ್ರಿಯ ತಾರಾ ಜೋಡಿ ದಿಗಂತ್ ಹಾಗೂ ಐಂದ್ರಿತಾ ರೈ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಕೂಡ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ರನ್ನು ಸಿಸಿಬಿ ವಿಚಾರಣೆಗೆ ಕರೆಸಿದೆ.