ಚಿತ್ರದುರ್ಗ,ನಿತ್ಯವಾಣಿ,(ಏ.14) : ಇಂದು ಡಾ: ಬಿ.ಆರ್.ಅಂಬೇಡ್ಕರ್ ರವರ 130 ನೇ ಜಯಂತಿ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಆಡಳಿತದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ನಂದಿನಿ, ಜಿಲ್ಲಾ ರಕ್ಷಣಾಧಿಕಾರಿ ಜಿ ರಾಧಿಕಾ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಹಾಗೂ ಇನ್ನಿತರು ಭಾಗವಹಿಸಿದ್ದರು