ಜಿಲ್ಲಾ ಕೇಂದ್ರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮನಗೊಳಿ ಪ್ರೇಮಾವತಿ ಅವರ ನೇತೃತ್ವದಲ್ಲಿ ಅದಾಲತ್ ನಡೆಯಿತು.

ಚಿತ್ರದುರ್ಗ:ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಮ್ಮಿಕೊಂಡಿದ್ದ ‘ಮೆಗಾ ಲೋಕ ಅದಾಲತ್’ನಲ್ಲಿ ಒಟ್ಟು 6,350 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.

ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಂದೇ ದಿನ ಇಷ್ಟೊಂದು ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾಗಿದ್ದು, ಅದಾಲತ್‍ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿರುವುದು ನ್ಯಾಯಾಂಗ ಇಲಾಖೆಯಲ್ಲಿ ಸಂತಸ ಮೂಡಿಸಿದೆ.

ಜಿಲ್ಲಾ ಕೇಂದ್ರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮನಗೊಳಿ ಪ್ರೇಮಾವತಿ ಅವರ ನೇತೃತ್ವದಲ್ಲಿ ಅದಾಲತ್ ನಡೆಯಿತು. ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 34,471 ಪ್ರಕರಣಗಳ ಪೈಕಿ 8,560 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 6,350 ಪ್ರಕರಣ ರಾಜಿ ಮೂಲಕ ಇತ್ಯರ್ಥಗೊಳಿಸಿ, ? 15.05 ಕೋಟಿ ಹಣವನ್ನು ಸಂಬಂಧಿಸಿದವರಿಗೆ ಕೊಡಿಸಲಾಯಿತು.

ವ್ಯಾಜ್ಯ ಪೂರ್ವ ಪ್ರಕರಣ ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 6 ಪ್ರಕರಣಗಳೊಂದಿಗೆ 4.4 ಲಕ್ಷ ಹಣವನ್ನು ಇತ್ಯರ್ಥಗೊಳಿಸಲಾಯಿತು. ಅದಾಲತ್‍ನಲ್ಲಿ ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್ ಮತ್ತು ನೀರಿನ ಶುಲ್ಕ ಪ್ರಕರಣ ಸೇರಿ ಇತರೆ ವ್ಯಾಜ್ಯ ಪೂರ್ವ ಪ್ರಕರಣಗಳು ಅದಾಲತ್‍ಗೆ ಆಯ್ಕೆಯಾಗಿದ್ದವು.

ಮೋಟಾರು ವಾಹನ ಅಪಘಾತ ಪರಿಹಾರ, ಭೂಸ್ವಾಧೀನ ಪ್ರಕರಣ, ಕಂದಾಯ ಪ್ರಕರಣ, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕುಸೇರಿ ಹಲವು ಪ್ರಕರಣ ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು.

ನ್ಯಾಯಾಧೀಶರು, ವಕೀಲರು ಹಾಗೂ ಕಕ್ಷಿದಾರರ ಸಂಪರ್ಕದೊಂದಿಗೆ ರಾಜಿ ಸಂಧಾನದ ಮೂಲಕ ಪ್ರಕರಣ
ಇತ್ಯರ್ಥಪಡಿಸಿದರು. ನ್ಯಾಯಾಧೀಶರಾದ ಬಸವರಾಜ್ ಎಸ್. ಚೇಗರೆಡ್ಡಿ, ಆರ್. ಬನ್ನಿಕಟ್ಟಿ ಹನುಮಂತಪ್ಪ, ಟಿ. ಶಿವಣ್ಣ, ಬಿ.ಕೆ. ಗಿರೀಶ್, ಇದ್ದರು.

 

Leave a Reply

Your email address will not be published.