ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಕೊರೊನಾದ ಆತಂಕ ಹೆಚ್ಚಳವಾಗಿದ್ದು, ಮಂಗಳೂರಿನ ನರ್ಸಿಂಗ್ ಕಾಲೇಜುಗಳಲ್ಲಿ ಒಟ್ಟು 78 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು, ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜುಗಳಲ್ಲಿಯೇ ಬರೋಬ್ಬರಿ 78 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮೊದಲ ಬ್ಯಾಚ್ ನಲ್ಲಿ ಆಗಮಿಸಿದ ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ತಪಾಸಣೆಗೊಳಗಾಗಿದ್ದರು. ಆದರೆ, ಅನೇಕ ಎರಡನೇ ಬ್ಯಾಚ್ ನ ಅನೇಕ ವಿದ್ಯಾರ್ಥಿಗಳು ಕೊರೊನಾ ತಪಾಸಣೆಗೆ ನಡೆಸದಿರುವುದು ಆತಂಕಕ್ಕೆ ಕಾರಣವಾಗಿದೆ.
ಸದ್ಯ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸದ್ಯ ಆರೋಗ್ಯ ಇಲಾಖೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಕಂಟೇನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಿ ಆದೇಶಿಸಿದೆ.