‘ಕ್ಷೇಮವಾಗಿ ಬಂದರೆ ನಿಮ್ಮ ಸೇವೆ..ಇಲ್ಲದಿದ್ದರೆ ಕ್ಷಮಿಸಿಬಿಡಿ..’ : ಕೈಮುಗಿದ ಮುನಿರತ್ನ

ಬೆಂಗಳೂರು:- ಕರೊನಾ ವೈರಸ್​ ಹಲವು ರಾಜಕಾರಣಿಗಳಿಗೆ ತಗುಲಿದೆ. ಸಚಿವರು, ಶಾಸಕರು..ಸಂಸದರು ಒಬ್ಬೊಬ್ಬರಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದೀಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಲ್ಲಿಯೂ ಕರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ.ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷದವನಾದ ನಾನು, ಇಂದು ಕೊವಿಡ್​-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್​ ವರದಿ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ…ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ ಎಂದು ತುಸು ಭಾವನಾತ್ಮಕವಾಗಿ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published.