BREAKING : ದೇಶದಲ್ಲಿಂದು 15,590 ಕೊರೋನಾ ಪ್ರಕರಣ ದಾಖಲು, 191 ಜನ ಸಾವು

 ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 15,590 ಹೊಸ ಪ್ರಕರಣಗಳು ದಾಖಲಾಗಿವೆ.

24 ಗಂಟೆಗಳಲ್ಲಿ 15,590 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,05,27,683ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 191 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,51,918ಕ್ಕೆ ತಲುಪಿದೆ.

1,05,27,683 ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 15,975 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,01,62,738ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,13,027 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಒಂದೇ ದಿನ 8,36,227 ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,34,89,114 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Leave a Reply

Your email address will not be published.