ಬೆಂಗಳೂರು : ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿ ಏನಾದರೂ ಲೋಪವಾದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ನೇರಹೊಣೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಬಳ್ಳಾರಿ ಜಿಲ್ಲಾ ಕೇಂದ್ರದಿಂದಲೇ ವರ್ಚುಯಲ್ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳೊಂದಿಗೆ ಸಭೆ ನಡೆಸಿದ ಡಿಸಿಎಂ, ಕೋವಿಡ್ ನಿರ್ವಹಣೆ ಏನೇ ಲೋಪವಾದರೂ ಜಿಲ್ಲಾಧಿಕಾರಿಯೇ ಹೊಣೆ ಎಂದರು.
ವ್ಯಕ್ತಿಯಿಂದ ಸ್ಯಾಂಪಲ್ ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು. ಒಂದು ಫಲಿತಾಂಶ ಪಾಸಿಟಿವ್ ಬಂದರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡುವುದೋ ಅಥವಾ ಅವರ ಮನೆಯಲ್ಲೇ ಐಸೋಲೇಷನ್ ಮಾಡಿ ಸೂಕ್ತ ಔಷಧಗಳನ್ನು ಫೂರೈಕೆ ಮಾಡಬೇಕು. ಈ ಪ್ರಕ್ರಿಯೆ ಅತ್ಯಂತ ವೇಗವಾಗಿ ಆಗಬೇಕು ಎಂದರು.,
ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ನಡೆಯುತ್ತಿಲ್ಲ. ಇದರಲ್ಲಿ ಬಹಳ ಲೋಪ ಕಂಡುಬರುತ್ತಿದೆ. ಫಲಿತಾಂಶವನ್ನು ಕೂಡ ತುಂಬಾ ತಡವಾಗಿ ನೀಡಲಾಗುತ್ತಿದೆ. ಹಾಗಾಗಿ ಸಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದೆ ಬಗ್ಗೆ ಕೂಡಲೇ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಆನಂದ್ ಸಿಂಗ್ ಅವರಿಗೆ ಹೇಳಿದರು,