ನಿತ್ಯವಾಣಿ, ಚಿತ್ರದುರ್ಗ, (ಜೂ.13) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾಲಿಬಾಲ್ ಸಂಸ್ಥೆ, ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಗಳಿಸಿದ ಯುವ ಕ್ರೀಡಾಪಟುಗಳಿಗೆ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ
ಶಾಸಕರು, ಸ್ವತಃ ಕ್ರೀಡಾ ಪಟುಗಳು ಆಗಿರುವ ಜಿ.ಹೆಚ್. ತಿಪ್ಪಾರೆಡ್ಡಿರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆಯನ್ನು ನೆರವೇರಿಸಿ ಜಿಲ್ಲಾ ಸರ್ಕಾರಿ ನೌಕರರ ವತಿಯಿಂದ ಆಯೋಜಿಸಲಾಗಿದ್ದ ಕರೋನಾ ಜಾಗೃತಿ ಘೋಷವಾಕ್ಯಗಳ ಸ್ಪರ್ಧೆಯಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪಾಲಾಕ್ಷ ರವರು ಮಾತನಾಡಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಕ್ರೀಡಾ ಪಟುಗಳು ದೇಶದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನೀವು ಲಸಿಕೆ ಪಡೆಯುವ ಮೂಲಕ ತಮ್ಮ ಅಕ್ಕ ಪಕ್ಕದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಲಸಿಕೆ ಪಡೆಯುವಂತೆ ಮನವೋಲಿಸುವಂತೆ ಮನವಿ ಮಾಡಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಕುಮಾರಸ್ವಾಮಿ ರವರು ಮಾತನಾಡಿ ಲಸಿಕೆ ಪಡೆಯುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿ ಲಸಿಕೆ ಪಡೆದ ನಂತರ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ ಎಂದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ ಮಂಜುನಾಥ್ ರವರು ಮಾತನಾಡಿ ಲಸಿಕಾ ಅಭಿಯಾನದ ಪ್ರಯೋಜನ ಪಡೆಯುವಂತೆ ಯುವ ಕ್ರೀಡಾಪಟುಗಳಿಗೆ ಮನವಿ ಮಾಡಿದರು. ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳ ಮಹತ್ವ ಎಷ್ಟೀರುತ್ತದೆಯೋ ಅಷ್ಟೇ ಮಹತ್ವ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ತಾವು ರಕ್ಷಿಸಿಕೊಂಡು ಉಳಿದವರನ್ನು ರಕ್ಷಿಸುವ ಜವಾಬ್ದಾರಿ ಹೊತ್ತಿರುವ ಮೋದಲನೇ ಸಾಲಿನಲ್ಲಿ ನಿಂತು ಕೆಲಸ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಅಧಿಕಾರಿ/ನೌಕರರಿಗೆ ಅಭಿನಂದನೆಗಳನ್ನು ತಿಳಿಸಿದರು. ಅಭಿಯಾನದಲ್ಲಿ ಭಾಗವಹಿಸಿರುವ ತಾವುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಗಳಿಸಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದೀರಿ. ಕ್ರೀಡಾ ಪಟುಗಳ ದೇಶದ ಆಸ್ತಿ ತಾವುಗಳು ಆರೋಗ್ಯದಿಂದ ಇರುವುದರಿಂದ ಇಡೀ ಜಿಲ್ಲೆ, ರಾಜ್ಯ, ದೇಶಕ್ಕೆ ಲಾಭವಿದೆ. ತಾವುಗಳು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ತಮ್ಮ ಗ್ರಾಮ, ವಾರ್ಡ್, ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಕಾಲೋನಿಗಳಲ್ಲಿನ ಜನರಲ್ಲಿ ಅರಿವು, ಜಾಗೃತಿ ಮೂಡಿಸಿ ಸರ್ಕಾರದಿಂದ ಉಚಿತವಾಗಿ ನೀಡುವ ಲಸಿಕೆಗಳನ್ನು ಪಡೆದು ದೇಶವನ್ನು ಸದೃಡಗೊಳಿಸುವ ಕೆಲಸದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಕುಮಾರ್ ಜಿ ಆರ್, ರಾಜ್ಯ ಪರಿಷತ್ ಸದಸ್ಯರಾದ ಕೆ ಟಿ ತಿಮ್ಮಾರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಜಯಲಕ್ಷ್ಮಿ ನಗರಸಭಾ ಸದಸ್ಯರಾದ ಪೊಲೀಸ್ ಮಲ್ಲಿಕಾರ್ಜುನ್, ಗಂಗಾಧರ್, _ರಾಜ್ಯ ರಾಷ್ಟ್ರದ ರಾಷ್ಟ್ರೀಯ ಮಟ್ಟದಲ್ಲಿ ಸ್ಥಳದ ಗಳಿಸಿದ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿದ್ದರು, ಸುದ್ದಿಗಾಗಿ, ಜಾಹೀರಾತಿಗಾಗಿ ,👉 ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್ ಟಿ ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020 www.nithyavaninews.com