ಗ್ರಾಮದ ಕಟ್ಟ ಕಡೆಯ ವ್ಯಕ್ತಿಯವರೆಗೂ ಕೋವಿಡ್ ಲಸಿಕೆ
ನಿತ್ಯವಾಣಿ,ಚಿತ್ರದುರ್ಗ, ( ಆ.31) :ತಾಲ್ಲೂಕಿನ ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕೂನಬೇವು ಗೊಲ್ಲರಹಟ್ಟಿ ಗ್ರಾಮದಲ್ಲಿ ಇಂದು ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರನ್ನು ಗುರುತಿಸಿ ಸ್ಥಳದಲ್ಲಿಯೇ ಲಸಿಕೆ ನೀಡಿದರು.
ಈ ಸಮಯದಲ್ಲಿ ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಮತಿ ಭಾರತೀ ಕಟ್ಟಿಮನಿ ಮಾತನಾಡಿ “ಕೋವಿಡ್ ಮೂರನೇ ಅಲೆ ನಿಯಂತ್ರಣ ಮಾಡುವ ಸಲುವಾಗಿ ಬೆಳಗಟ್ಟ ಆರೋಗ್ಯ ಕೇಂದ್ರ ವ್ಯಾಪ್ತಿಯ ಪ್ರತಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಎಲ್ಲರಿಗೂ ಲಸಿಕೆ ನೀಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ. ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಗ್ರಾಮಗಳಲ್ಲಿ ಲಸಿಕಾ ಶಿಬಿರಗಳನ್ನು ಈಗಾಗಲೇ ಹಮ್ಮಿಕೊಳ್ಳುತ್ತಿದ್ದೇವೆ. ಜಿಲ್ಲಾ ಬೆಳಗಟ್ಟ ಆಡಳಿತ ವೈದ್ಯಾಧಿಕಾರಿ ನಳಿನಾಕ್ಷಿಯವರ ನೇತೃತ್ವದಲ್ಲಿ ಇದನ್ನು ಇನ್ನಷ್ಟು ವಿಸ್ತರಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಲಸಿಕೆಯ ಲಭ್ಯತೆ ಆಧಾರದಲ್ಲಿ ಶಿಬಿರಗಳನ್ನು ಏರ್ಪಡಿಸಲಿದ್ದೇವೆ’ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಶ್ರೀಮತಿ ಭಾರತಮ್ಮ, ಮಹಿಳಾ ಸಂಘದ ಅಧ್ಯಕ್ಷೆ ದುರ್ಗಮ್ಮ, ಆಶಾ ಕಾರ್ಯಕರ್ತೆಯರಾದ ಸರಸ್ವತಿ, ತಿಪ್ಪಮ್ಮ, ಅನುರಾಧ, ಅಂಗನವಾಡಿ ಶಿಕ್ಷಕಿ ಸವಿತಾ, ಸಹಾಯಕಿ ರೂಪಾ ಹಾಗೂ ಇತರರು ಹಾಜರಿದ್ದರು.