ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಹೊಳಲ್ಕೆರೆ ಆರೋಗ್ಯ ಅಧಿಕಾರಿಗಳು ಡಾಕ್ಟರ್ ಜಯ ಸಿಂಹ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲಾಡಿಹಳ್ಳಿ ಡಾಕ್ಟರ್ ಅಂಬರೀಶ್ ಇವರುಗಳು ಕಾಲೇಜಿನ 50 ಜನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಯಿತು, ಯಾವುದೇ ಅಡ್ಡ ಪರಿಣಾಮವಿಲ್ಲದೆ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು, ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ನಾಗರಾಜ್ ನೇತೃತ್ವ ವಹಿಸಿದ್ದರು, ಡಾಕ್ಟರ್ ರಾಮಚಂದ್ರ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು