ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ತಪ್ಪದೇ ಸರ್ಕಾರದಿಂದ  ಏರ್ಪಡಿಸಿರುವ *ಕೋವಿಡ್ ಲಸಿಕಾ ಅಭಿಯಾನ* ದಲ್ಲಿ ಭಾಗವಹಿಸಿ :: ಕೆ.ಮಂಜುನಾಥ

ಚಿತ್ರದುರ್ಗ,ನಿತ್ಯವಾಣಿ,ಏ.8 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಶಾಖೆ ಅಧ್ಯಕ್ಷರಾದ  ಮಂಜುನಾಥ ಕೃಷ್ಣಮೂರ್ತಿ ಚಿಕ್ಕಂದವಾಡಿರವರು.     ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್  ಲಸಿಕೆಯನ್ನು ಪಡೆದು ಮಾತನಾಡುತ್ತ,    ಕೆಲವು ವ್ಯಕ್ತಿಗಳು ಲಸಿಕೆ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಲಸಿಕೆಯಿಂದ ಯಾವುದೇ ರೀತಿಯ ಆರೋಗ್ಯ ತೊಂದರೆ ಉಂಟಾಗುವುದಿಲ್ಲ ಎಂಬುದು ಸತ್ಯ ಸಂಗತಿಯಾಗಿದೆ.
ಪ್ರಸ್ತುತ ದಿನಗಳಲ್ಲಿ ಇಡೀ ದೇಶ ಮತ್ತು ರಾಜ್ಯಗಳು ಕೋವಿಡ್-19 ಕರೋನ ಸಾಂಕ್ರಾಮಿಕ ರೋಗದಿಂದ ತತ್ತರಿಸಿ ಆರ್ಥಿಕ ಪರಿಸ್ಥಿತಿಯನ್ನು ಮತ್ತು ಜನಸಾಮಾನ್ಯರ ಜೀವನ ಸ್ಥಿತಿಯನ್ನು ದುಸ್ಥಿತಿಗೆ ತಂದಿದೆ. ಇಂತಹ ಸನ್ನಿವೇಶದಲ್ಲಿ ಈ ಮಹಾಮಾರಿಯ ನಿಯಂತ್ರಣಕ್ಕೆ  ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ಅನುಮೋದಿತ ದೇಶೀಯ ಲಸಿಕೆ ಗಳಾದ ಕೋ-ವ್ಯಾಕ್ಸಿನ್ ಮತ್ತು ಕೋವಿ ಶಿಲ್ಡ್ ಬಿಡುಗಡೆ ಮಾಡಿದ್ದು ಕೇಂದ್ರ ಮತ್ತು ರಾಜ್ಯಗಳ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ನಡೆಸುತ್ತಿರುವ ಈ ಸಂದರ್ಭದಲ್ಲಿ ದೇಶದ ಪ್ರಜೆಗಳಾದ ನಾವು ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಎಲ್ಲರೂ ಸಹ ಲಸಿಕೆಯನ್ನು ಪಡೆದು ಈ ಮಹಾಮಾರಿ ನಿಯಂತ್ರಣ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ.
ಈ ನಿಟ್ಟಿನಲ್ಲಿ ದೇಶದ ಮಾನ್ಯ ಪ್ರಧಾನ ಮಂತ್ರಿಗಳಿಂದ ಇದು ಸಮಾಜದ ಕಟ್ಟಕಡೆಯ ವ್ಯಕ್ತಿಯ ವರೆಗೂ ಎಲ್ಲರೂ ಸಹ ಲಸಿಕೆಯನ್ನು ಪಡೆಯಲು ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಮತ್ತು ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ *ಲಸಿಕಾ ಅಭಿಯಾನವನ್ನು* ನಡೆಸುತ್ತಿದೆ ಆದ್ದರಿಂದ ಪ್ರತಿಯೊಬ್ಬ ನಾಗರೀಕರು ಮತ್ತು ನೌಕರರು ಸಹ ಯಾವುದಾದರೂ ಒಂದು ಗುರುತಿನ ಚೀಟಿಯೊಂದಿಗೆ ಆರೋಗ್ಯ ಕೇಂದ್ರಕ್ಕೆ ಹೋಗಿ ಲಸಿಕೆ ತೆಗೆದುಕೊಳ್ಳುವ ಮೂಲಕ  ಸರ್ಕಾರದ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಈ ಮಹಾಮಾರಿಯಿಂದ ಪಾರಾಗಲು ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಲು ಕೋರಿದೆ.
ಈ ಬಗ್ಗೆ ತಮ್ಮ ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ತಪ್ಪದೇ ಸರ್ಕಾರದಿಂದ  ಏರ್ಪಡಿಸಿರುವ *ಕೋವಿಡ್ ಲಸಿಕಾ ಅಭಿಯಾನ* ದಲ್ಲಿ ಭಾಗವಹಿಸಿ
ಕೋವಿಡ್  ಲಸಿಕೆಯನ್ನು ಪಡೆದು  ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ.  ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸದಾ ಮುಂಚೂಣಿಯಲ್ಲಿರುವ ಸರ್ಕಾರಿ ನೌಕರರು ಕೋವಿಡ್ ಲಸಿಕೆಯನ್ನು ಪಡೆಯುವ ಮೂಲಕ ತನ್ನ ಮತ್ತು ತನ್ನ ಕುಟುಂಬದ ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಆದ್ದರಿಂದ ಜಿಲ್ಲೆಯಲ್ಲಿರುವ ಸಮಸ್ತ ಸರ್ಕಾರಿ ನೌಕರರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಲು ನೌಕರರಲ್ಲಿ ಜಾಗೃತಿ ಮೂಡಿಸಲು ಪತ್ರಿಕ ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಬೇಕಾಗಿ  ಮನವಿ ಮಾಡಿದತದ್ದಾರೆ.

Leave a Reply

Your email address will not be published.