ನಿತ್ಯವಾಣಿ,ಚಿತ್ರದುರ್ಗ,(ಜೂ.19 : ಕೊರೋನಾ ಎರಡನೆ ಹಂತದ ಅಲೆ ಎಲ್ಲೆಡೆ ವ್ಯಾಪಿಸಿರುವುದರಿಂದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಿ, ಸ್ಯಾನಿಟೈಸ್ ಬಳಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್‍ರವರ ಪುತ್ರ ಅನಿತ್ ಮನವಿ ಮಾಡಿದರು.
ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹದಿನೆಂಟರಿಂದ 44 ವರ್ಷದೊಳಗಿನವರಿಗೆ ಕೋವಿಡ್ ವಿರುದ್ದ ನೀಡುವ ಲಸಿಕೆಗೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಘೋಷಿಸಿದ್ದು, ಪ್ರತಿಯೊಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೊರೋನಾ ಹಿಮ್ಮೆಟ್ಟಸಲು ಕೈಜೋಡಿಸುವಂತೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.
ಕಳೆದ ವರ್ಷದಿಂದಲೂ ಕೊರೋನಾ ಎಲ್ಲರನ್ನು ಬಾಧಿಸುತ್ತಿದ್ದು, ಅನಗತ್ಯವಾಗಿ ಯಾರು ಹೊರಗಡೆ ತಿರುಗಾಡದೆ ಮನೆಯಲ್ಲಿಯೇ ಸುರಕ್ಷಿತವಾಗಿರುವುದು ಕ್ಷೇಮ. ಸರ್ಕಾರ ಲಾಕ್‍ಡೌನ್ ಘೋಷಿಸಿರುವುದನ್ನು ಉಲ್ಲಂಘಿಸದೆ ಪಾಲನೆ ಮಾಡುವುದರಿಂದ ಮಾತ್ರ ಕೊರೋನಾದಂತ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು.
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶ್ರಮಿಕರು ಹಾಗೂ ವಿವಿಧ ವಲಯಗಳ ಕಾರ್ಮಿಕರಿಗೆ 1250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಜನತೆಯ ಮೇಲೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಆದರೆ ಕಾಂಗ್ರೆಸ್ ಪಕ್ಷದವರ ಅಪಪ್ರಚಾರಕ್ಕೆ ಯಾರು ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳುತ್ತಾರೋ ಅಂತಹವರು ಕೊರೋನಾದಿಂದ ಜೀವ ರಕ್ಷಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‍ಸಿದ್ದಾಪುರ, ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ರೈತ ಮೋರ್ಚದ ಕಿರಣ್ ಡಿ.ಎಸ್.ಹಳ್ಳಿ, ಮಾಜಿ ಯುವ ಮೋರ್ಚ ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಶರತ್, ಜಿಲ್ಲಾಸ್ಪತ್ರೆಯ ಡಾ.ಕುಮಾರಸ್ವಾಮಿ, ಗಂಗಾಧರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.
ಸುದ್ದಿಗಾಗಿ, ಜಾಹೀರಾತಿಗಾಗಿ ,ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್ ಟಿ ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020