ಹೆಚ್‌ಡಿಕೆಗೆ ಆಸ್ಪತ್ರೆಯಲ್ಲಿ ಬೆಡ್‌ ಸಿಗ್ಲಿಲ್ವಾ? ಹಾಗಾದ್ರೆ, ಸಚಿವ ಸುಧಾಕರ್‌ʼಗೆ ಥ್ಯಾಂಕ್ಸ್ ಹೇಳಿದ್ಯಾಕೆ ಮಾಜಿ ಸಿಎಂ? ಇಲ್ಲಿದೆ ವಿವರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವ್ರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ನಿವಾಸದಲ್ಲಿಯೇ ಕ್ವಾರಂಟೈನ್ ಆಗಿದ್ರು. ಮಣಿಪಾಲ್‌ ಆಸ್ಪತ್ರೆಯಲ್ಲಿ ಬೆಡ್‌ ಸಿಗದ ಕಾರಣ ಮಾಜಿ ಸಿಎಂ ಮನೆಯಲ್ಲಿಯೇ ಪ್ರತ್ಯೇಕವಾದ್ದಾರೆ ಅನ್ನೋ ಸುದ್ದಿಗಳು ಓಡಾದ್ವು. ಆದ್ರೆ, ಇದಕ್ಕೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಸುಧಾಕರ್‌, ಮಣಿಪಾಲ್ ಹಾಗೂ ಅಪೋಲೋ ಆಸ್ಪತ್ರೆಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡಿರುವೆ, ನಿರಂತರ ಸಂಪರ್ಕದಲ್ಲಿರುವೆ. ಸುಳ್ಳು ಸುದ್ದಿ ಹಬ್ಬಿಸ್ಬೇಡಿ ಎಂದು ಸ್ಪಷ್ಟಪಡಿಸಿದರು.

ಅಂದ್ಹಾಗೆ, ಕುಮಾರಸ್ವಾಮಿಯವ್ರು ಸಧ್ಯ ಬನ್ನೇರುಘಟ್ಟ ರಸ್ತೆ ಬಳಿಯಿರುವ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂತ್ರ ಆರೋಗ್ಯ ಸಚಿವ ಡಾ. ಸುಧಾಕರ್‌ ಅವ್ರಿಗೆ ಧನ್ಯವಾದ ತಿಳಿಸಿದ್ದಾರೆ. ಇಷ್ಟಕ್ಕೂ ಮಾಜಿ ಸಿಎಂ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾದ ನಂತ್ರ ಆರೋಗ್ಯ ಸಚಿವರಿಗೆ ಥ್ಯಾಂಕ್ಸ್‌ ಹೇಳಿದ್ಯಾಕೆ? ಇದಕ್ಕೂ ಕಾರಣವಿದೆ. ಅದನ್ನ ಸ್ವತಃ ಕುಮಾಸ್ವಾಮಿಯವ್ರೇ ಸರಣಿ ಟ್ವೀಟ್‌ʼಗಳ ಮೂಲಕ ಸ್ಪಷ್ಟ ಪಡಿಸಿದ್ದಾರೆ.

‘ನನಗೆ ಇಂದು ಬೆಳಿಗ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾಕ್ಟರ್ ಮಂಜುನಾಥ್ ಹಾಗೂ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಸುಧಾಕರ್ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಕಾಯ್ದಿರಿಸಿದ್ದರು’ ಎಂದಿದ್ದಾರೆ.’ತುರ್ತಾಗಿ ಸ್ಪಂದಿಸಿ ನನ್ನೊಂದಿಗೆ ಮಾತನಾಡಿದರು. ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನ್ಯಾಯಾಲಯದ ಪ್ರಕರಣವೊಂದರ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಗಿ ಆಗಬೇಕಾಗಿದ್ದರಿಂದ ಮಧ್ಯಾಹ್ನ ನಂತರ ಅಪೋಲೋ ಆಸ್ಪತ್ರೆಗೆ ದಾಖಲಾದೆ’ ಎಂದು ಹೆಚ್‌ಡಿಕೆ ಹೇಳಿದ್ದಾರೆ.ನಂತ್ರ ‘ಎರಡನೇ ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲೇ ಕೊರೊನಾ ಚಿಕಿತ್ಸೆ ಪಡೆಯಲು ತೀರ್ಮಾನಿಸಿ, ಚೇತರಿಸಿಕೊಳ್ಳುತ್ತಿದ್ದೇನೆ. ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಎಲ್ಲರಿಗೂ ನನ್ನ ಪ್ರಣಾಮಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published.