ಚಿತ್ರದುರ್ಗ,ಜನವರಿ 25 : 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲಾ ಮುಖ್ಯವಾಹಿನಿಗೆ ತರಲು ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗಿದೆ.
ನಗರ ಸ್ಥಳೀಯ ಸಂಸ್ಥೆಯ ಕಚೇರಿಯ ಹಾಗೂ ಇತರೆ ಸಿಬ್ಬಂದಿಗಳು ಮನೆ ಮನೆ ಸಮೀಕ್ಷೆಗೆ ತಮ್ಮ ಮನೆಗಳಿಗೆ ಭೇಟಿ ನೀಡಿದಾಗ ಸಾರ್ವಜನಿಕರು ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.