ನಿತ್ಯವಾಣಿ, ಚಳ್ಳಕೆರೆ, (ಆ.24) : ಮಗಳು ಪ್ರೀತಿಸಿ ಮದುವೆಯಾದ ಕಾರಣ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ. ನಗರಂಗೆರೆ ಗ್ರಾಮದ ನಿವಾಸಿ ದ್ಯಾಮಣ್ಣ (45) ಮೃತ ವ್ಯಕ್ತಿ. ಮೃತ ದ್ಯಾಮಣ್ಣ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಮಗಳು ಮನೆಬಿಟ್ಟು ಹೋಗಿದ್ದರಿಂದ ಮರ್ಯಾದೆ ಹೋಗಿತ್ತು ಎಂದು ಮನನೊಂದು ಈ ಅವಾಂತರ ಮಾಡಿಕೊಳ್ಳಲಾಗಿದೆ ಎಂದು ಹೇಳುತ್ತಿದ್ದಾರೆ. ಮನೆಯಲ್ಲಿ ಸೂಸೈಡ್ ಗೆ ಯತ್ನ ಮಾಡಿದ್ದು ಮನೆಯಲ್ಲಿ ಹೆಂಡತಿ ಮಕ್ಕಳು ತಡೆದಿದ್ದಾರೆ. ಆದ್ರೆ ಆಟೋ ಹತ್ತಿ ಊರ ಹೊರಗೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.