ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರು ಚಿತ್ರದುರ್ಗ ಕ್ಕೆ ಆಕಸ್ಮಿಕ ಭೇಟಿ .

ನಿತ್ಯವಾಣಿ, ಚಿತ್ರದುರ್ಗ, (ಮೇ. 27) : ಗುರುವಾರ ಚಿತ್ರದುರ್ಗ ಕ್ಕೆ  ಅನಿರೀಕ್ಷಿತವಾಗಿ ಶಿವಮೊಗ್ಗ ಜಿಲ್ಲೆಯ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ  ಸಿ.ಎಸ್ ಷಡಾಕ್ಷರಿಯವರು ಭೇಟಿ ಕೊಟ್ಟರು,

ಸಿ.ಎಸ್ ಷಡಾಕ್ಷರಿಯವರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ, ಕೋವಿಡ್ ಬಾಧಿತ ಸರ್ಕಾರಿ ನೌಕರರಿಗೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಕೆರ್ ಸೆಂಟರ್ ಮತ್ತು frontline workers’ ಗಳಿಗೆ ಲಸಿಕೆಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮತ್ತು ತಾಲ್ಲೂಕು ಸಂಘಗಳಿಂದ ಮನವಿ ಮಾಡಲಾಗಿದೆ. ಸರ್ಕಾರಿ ನೌಕರರ ಸಂಘದ ಮನವಿಯ ಮೇರೆಗೆ ಅಧಿಕಾರಿಗಳು ಸ್ಪಂದಿಸಿ ಚಿತ್ರದುರ್ಗ ಹಾಗೂ ಚಳ್ಳಕೆರೆ ತಾಲೂಕುಗಳಲ್ಲಿ ಈಗಾಗಲೇ ಸರ್ಕಾರಿ ನೌಕರರಿಗೆ *COVID CARE CENTRE* ಗಳನ್ನು ತೆರೆಯಲಾಗಿದೆ. ಉಳಿದ ತಾಲೂಕುಗಳಲ್ಲಿ ಶೀಘ್ರವೇ ಕ್ರಮ ಕೈಗೊಂಡು *COVID CARE CENTRE* ಗಳನ್ನು ತೆರೆಯಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ರಾಜ್ಯಾಧ್ಯಕ್ಷರಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಕೆ ಮಂಜುನಾಥ್ ಸಣ್ಣ ನೀರಾವರಿ ಇಲಾಖೆಯ ನಿರ್ದೇಶಕರಾದ ಪ್ರಕಾಶ್, ರಮೇಶ್,
ಲೋಕೋಪಯೋಗಿ ಇಲಾಖೆ ರಾಜುರವರು ಉಪಸ್ಥಿತರಿದ್ದರು.

Leave a Reply

Your email address will not be published.