ಜೆಡಿಎಸ್ ನಲ್ಲಿ ಮಹತ್ವದ ಬದಲಾವಣೆ ಪರ್ವಕ್ಕೆ ಚಾಲನೆ :: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ. ಇದಕ್ಕಾಗಿ ಜನವರಿ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ನಲ್ಲಿ ಮಹತ್ವದ ಬದಲಾವಣೆ ಪರ್ವಕ್ಕೆ ಚಾಲನೆ ನೀಡಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಮಾಜಿ ಸಿಎಂ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿಯವರು, ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

Leave a Reply

Your email address will not be published.