10 ಮತ್ತು 12ನೇ ತರಗತಿ ಪರೀಕ್ಷೆಗಳ ದಿನಾಂಕ ಪ್ರಕಟ..!
ನವದೆಹಲಿ: ಸಿಬಿಎಸ್ ಇ 10ನೇ ತರಗತಿ ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ದಿನಾಂಕಗಳನ್ನ ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಶನಿವಾರ ತಿಳಿಸಿದ್ದಾರೆ.
ಟ್ವೀಟ್ ಮೂಲಕ ವಿಷಯ ತಿಳಿಸಿದ ಸಚಿವರು, ‘ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಮುಖ ಘೋಷಣೆಗಳು! 2021ರ ಡಿಸೆಂಬರ್ 31ರಂದು #CBSE ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗುವ ದಿನಾಂಕವನ್ನ ನಾನು ಘೋಷಿಸುತ್ತೇನೆ. ‘ ಎಂದು ಬರೆದಿದ್ದಾರೆ.
ಕೊರೊನಾ ವೈರಸ್ ಸ್ಫೋಟವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಹಿಂದೆ ಪರೀಕ್ಷೆಗಳನ್ನು ಮುಂದೂಡಿತ್ತು. ‘ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ಮುಂದಿನ ವರ್ಷದ ಫೆಬ್ರವರಿವರೆಗೆ ನಡೆಸದಿರಲು ನಿರ್ಧರಿಸಲಾಗಿದೆ. 2021ರ ಪರೀಕ್ಷೆಗಳನ್ನು ನಡೆಸಲು ಸಿಬಿಎಸ್ ಇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪರಿಸ್ಥಿತಿ ಅವಲೋಕಿಸಿ, ಮಧ್ಯಸ್ಥಗಾರರ ಜತೆ ಚರ್ಚಿಸಿದ ನಂತರ ಪರೀಕ್ಷೆ ವೇಳಾಪಟ್ಟಿಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಚಿವರು ಈ ಮೊದಲು ಹೇಳಿದ್ದರು.