BIG NEWS: ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ; ಹೋರಾಟದ ಎಚ್ಚರಿಕೆ ನೀಡಿದ ಸಮುದಾಯ

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಪೊಗರು ಸಿನಿಮಾ ದೃಶ್ಯವೊಂದರಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ಚಿತ್ರತಂಡ ಈ ದೃಶ್ಯವನ್ನು ಚಿತ್ರದಿಂದ ತೆಗೆದುಹಾಕಬೇಕು ಹಾಗೂ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು. ಫೆ.23ರಂದು ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡುತ್ತಿದ್ದು, ಫೆ.24ರಂದು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಚ್ಚಿದಾನಂದಮೂರ್ತಿ ತಿಳಿಸಿದ್ದಾರೆ.

Leave a Reply

Your email address will not be published.