ಬಳಿಕ ನಿಖಿಲ್ ಕುಮಾರಸ್ವಾಮಿಗೂ ಬೆನ್ನು ಬಿದ್ದ ಸೋಂಕು!

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಅಂಟಿಕೊಂಡಿದೆ.

ಇತ್ತೀಚೆಗಷ್ಟೇ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೋಂಕು ಕಾಣಿಸಿಕೊಂಡಿತ್ತು. ಇದರ ನಂತರ ಸದ್ಯ ನಿಖಿಲ್ ಅವರಿಗೂ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಆದರೆ, ಯಾರು ಆತಂಕ ಪಡಬಾರದು. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಹೇಳಿದ್ದಾರೆ.

ವಿಶೇಷವೆಂದರೆ ನಿಖಿಲ್ ಹಾಗೂ ರೇವತಿ ದಂಪತಿಗಳಿಗೆ ಇಂದು ಮದುವೆ ವಾರ್ಷಿಕೋತ್ಸವವಿತ್ತು. ಇಬ್ಬರೂ ಇದರ ಖುಷಿಯಲ್ಲಿರುವಾಗಲೇ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published.