ಮೆಗಾಸ್ಟಾರ್ ಚಿರಂಜೀವಿ ಅಭಿನಯದ * ಆಚಾರ್ಯ*ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ.

ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಿದ್ದರು. ಈ ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದ್ದವು. ಈ ಸಿನಿಮಾದಲ್ಲಿ ಚಿರಂಜೀವಿ ಪುತ್ರ ರಾಮ್ ಚರಣ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಚಿರಂಜೀವಿ ಅವರ 152ನೇ ಸಿನಿಮಾ ಇದಾಗಿದ್ದು ರಾಮ್ ಚರಣ್ ತೇಜ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 140 ಕೋಟಿ ಬಜೆಟ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ.

Leave a Reply

Your email address will not be published.