ಕಿಚ್ಚ ಸುದೀಪ್ ರಿಂದ ಉದ್ಘಾಟನೆ::ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ

51 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕ್ಷಣಗಣನೆ : ಕಿಚ್ಚ ಸುದೀಪ್ ರಿಂದ ಉದ್ಘಾಟನೆ

ಪಣಜಿ: ಗೋವಾದಲ್ಲಿ ಶನಿವಾರದಿಂದ ಆರಂಭಗೊಳ್ಳಲಿರುವ 51 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಉದ್ಘಾಟನೆ ಮಾಡಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.

ಪಣಜಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಜೀವಮಾನದ ಗೌರವ ಪ್ರಶಸ್ತಿಯನ್ನು ಇಟಾಲಿಯನ್ ಚಲನಚಿತ್ರ ಖ್ಯಾತಿಯ ಪಿಕೇರಿಯಲ್ ಸ್ಟೋರಿಯೊ ರವರಿಗೆ ನೀಡಲಾಗುತ್ತಿದೆ. ಚಲನಚಿತ್ರೋತ್ಸವ ಉಧ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಉಪಸ್ಥಿತರಿರುವರು. ಪಣಜಿಯ ನಾಲ್ಕು ಆಡಿಟೋರಿಯಂನಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಉದ್ಘಾಟನಾ ಸಮಾರಂಭವು ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

ಪ್ರಸಕ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 60 ದೇಶಗಳು ಪಾಲ್ಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

Leave a Reply

Your email address will not be published.