ನಿತ್ಯವಾಣಿ, ಚಿತ್ರದುರ್ಗ, (ಜೂ.11) : ಶ್ರೀಗುರುಕರಿಬಸವೇಶ್ವರ ಮಠ ಬೆಳಗಟ್ಟ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಭಿಮಾನಿಗಳ ಬಳಗದಿಂದ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಆಹಾರದ ಪೊಟ್ಟಣ, ನೀರಿನ ಪ್ಯಾಕೆಟ್‍ಗಳನ್ನು ವಿತರಿಸಲಾಯಿತು.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ಅವರ ಸಂಬಂಧಿಗಳಿಗೆ ಊಟಕ್ಕೆ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಕಳೆದ 34 ದಿನಗಳಿಂದಲೂ ಆಹಾರ, ನೀರಿನ ಪ್ಯಾಕೆಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಬಿಜೆಪಿ.ಯುವ ಮುಖಂಡ ಬಿ.ಟಿ.ಸೋಮೇಂದ್ರ ತಿಳಿಸಿದರು.
ಓಬಳೇಶಿ, ಪರಶುರಾಂ, ಕುಮಾರ್, ಅಶೋಕ್, ಸಂತೋಷ್, ಕಾಂತರಾಜ್, ವಿನಿ ಈ ಸಂದರ್ಭದಲ್ಲಿ ಹಾಜರಿದ್ದರು. ಸುದ್ದಿಗಾಗಿ, ಜಾಹೀರಾತಿಗಾಗಿ 👉 ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್ ಟಿ ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020