ನಿತ್ಯವಾಣಿ,ಚಿತ್ರದುರ್ಗ, (ಜೂ,10) : ಚಿತ್ರದುರ್ಗ ಜಿಲ್ಲಾ ಖಾಸಗಿ ಬಸ್ ಚಾಲಕರ ಕ್ಷೇಮಾಭಿವೃದ್ದಿ ಸಂಘದಿಂದ ಖಾಸಗಿ ಬಸ್‍ನಿಲ್ದಾಣದಲ್ಲಿ ಗುರುವಾರ ಬಸ್ ಚಾಲಕರುಗಳಿಗೆ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸಲಾಯಿತು.
ಮೆದೇಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಸ್‍ನಿಲ್ದಾಣದಲ್ಲಿ ಚಾಲಕರುಗಳಿಗೆ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕೊರೋನಾ ಎರಡನೆ ಅಲೆ ತೀವ್ರವಾಗಿರುವುದರಿಂದ ಸರ್ಕಾರ ಲಾಕ್‍ಡೌನ್ ಘೋಷಿಸಿದ್ದು, ಎಲ್ಲಾ ವರ್ಗದವರಿಗೂ ಜೀವನಕ್ಕೆ ತೊಂದರೆಯಾಗಿರುವ ಇಂದಿನ ಸಂದರ್ಭದಲ್ಲಿ ಖಾಸಗಿ ಬಸ್ ಚಾಲಕರ ಕ್ಷೇಮಾಭಿವೃದ್ದಿ ಸಂಘದಿಂದ 800 ಚಾಲಕರುಗಳಿಗೆ ಅಕ್ಕಿ, ರಾಗಿ, ಬೇಳೆ, ಗೋಧಿಹಿಟ್ಟು, ಎಣ್ಣೆ, ಸಕ್ಕರೆಯುಳ್ಳ ಕಿಟ್‍ಗಳನ್ನು ನೀಡುತ್ತಿರುವುದು ಅತ್ಯಂತ ಮಾನವೀಯ ಕೆಲಸ. ಕೊರೋನಾ ನಿಗ್ರಹಿಸುವುದು ಎಲ್ಲರ ಜವಾಬ್ದಾರಿಯಾಗಿರುವುದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸ್ಯಾನಿಟೈಸ್ ಬಳಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.