ನಿತ್ಯವಾಣಿ,ಚಿತ್ರದುರ್ಗ, (ಜೂ.21) : ಚಿತ್ರದುರ್ಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣ ಇಲಾಖೆ, ವತಿಯಿಂದ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮ ಈಗತಾನೆ ಪೋಲಿಸ್ ಕವಾಯತು ಮೈದಾನದಲ್ಲಿಪ್ರಾರಂಭವಾಯಿತು, ಈ ಕಾರ್ಯಕ್ರಮವನ್ನು ಶಾಸಕ ತಿಪ್ಪಾರೆಡ್ಡಿ ರವರು ಉದ್ಘಾಟಿಸಿ ಮಾತನಾಡುತ್ತಾ ಇದರಲ್ಲಿ ಎಲ್ಲಾ ಅದಿನೆಂಟು ವಯಸ್ಸಿನವರ ಮೇಲ್ಪಟ್ಟವರಿಗೆ ನಗರದ ಎಲ್ಲಾ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಉಚಿತ ಲಸಿಕೆಯನ್ನು ಪಡೆದು ಮುಂದಿನ ಮೂರನೇ ಅಲೆಗೆ ಯಾರೂ ಕೂಡ ಹೆದರದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶದಂತೆ ಉಚಿತ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹೇಳಿದರು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ ರಾಧಿಕಾ ರವರು , ಅಪರ ಜಿಲ್ಲಾಧಿಕಾರಿಗಳು,ಜಿಲ್ಲಾ ಆರೋಗ್ಯ ಅಧಿಕಾರಿ ಪಾಲಾಕ್ಷ, ಆರೋಗ್ಯ ಅಧಿಕಾರಿ ಕುಮಾರಸ್ವಾಮಿ, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು ಇದ್ದರು.ಉಚಿತ ಸುದ್ದಿ, ಜಾಹೀರಾತಿಗಾಗಿ ,👉ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್. ಟಿ .ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020 , www.nithyavaninews.com