ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯಲ್ಲಿ ಜನವರಿ 09ರಂದು 74.2 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆಯ ವಿವರ ಇಂತಿದೆ.
ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಚಿತ್ರದುರ್ಗ-1ರಲ್ಲಿ 8.8 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ-2ರಲ್ಲಿ 6.6 ಮಿ.ಮೀ, ಹಿರೇಗುಂಟನೂರು 1, ಭರಮಸಾಗರ 13 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಹಿರಿಯೂರಿನಲ್ಲಿ 12.2, ಬಬ್ಬೂರು 9.6, ಇಕ್ಕನೂರು 5.0, ಈಶ್ವರಗೆರೆ 3.4 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ನಾಯಕನಹಟ್ಟಿಯಲ್ಲಿ 7.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ಹೊಳಲ್ಕೆರೆಯಲ್ಲಿ 1.2, ರಾಮಗಿರಿ 40.4, ಬಿ.ದುರ್ಗ 12.4, ತಾಳ್ಯ 2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಹೊಸದುರ್ಗದಲ್ಲಿ 1.6, ಬಾಗೂರು 3, ಮಾಡದಕರೆಯಲ್ಲಿ 18 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.