ರಾಜ್ಯ ಸರ್ಕಾರಿ ನೌಕರರಿಗೆ ವಿವಿಧ ಸೌಲಭ್ಯಗಳನ್ನು ನೀಡಿರುವುದಕ್ಕೆ ಅಭಿನಂದನೆ : ಕೆ. ಮಂಜುನಾಥ್

ಚಿತ್ರದುರ್ಗ : ರಾಜ್ಯದ 2021-2022ನೇ ಸಾಲಿನ ಆಯ-ವ್ಯಯದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ರಾಜ್ಯಸರ್ಕಾರಿನೌಕರರಿಗೆ ವಿವಿಧ ಸೌಲಭ್ಯಗಳನ್ನು ನೀಡಿರುವುದು ಸಂತಸದ ವಿಷಯ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ  ಚಿತ್ರದುರ್ಗ  ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾದ ಸೌಲಭ್ಯಗಳು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ಈಗಾಗಲೇ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಾರ್ಪಡಿಸಿ ಶಸ್ತ್ರ ಚಿಕಿತ್ಸೆ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ನೀಡಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯನ್ನು ಏ.1 ರಿಂದ ಅನುಷ್ಠಾನಕ್ಕೆ ಬರಲಿದೆ. ಹೆಚ್.ಆರ್.ಎಂ.ಎಸ್-02 ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಸೇವೆಗಳನ್ನು ಆನ್‍ಲೈನ್ ಮೂಲಕ ಜಾರಿಗೆ ತರುವುದು. ವಿಮಾ ಇಲಾಖೆಯ ಎಲ್ಲಾ ವ್ಯವಹಾರಗಳ ಗಣಕೀಕರಣಗೊಳಿಸುವುದು, ಮಹಿಳಾ ಸರ್ಕಾರಿ ನೌಕಕರಿಗೆ 06 ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ ನೀಡುವುದು.

ಸರ್ಕಾರಿ ನೌಕರರು/ಅಧಿಕಾರಿಗಳ ವಿರುದ್ದ ಅನಾಮಧೇಯ ದೂರುಗಳ ಅರ್ಜಿಗಳನ್ನು ತನಿಖೆಗೆ ಒಳಪಡಿಸದೆ ಹಾಗೂ ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ಮಾತ್ರ ತನಿಖೆಗೆ ಪರಿಗಣಿಸುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಎಲ್ಲಾ ಸೌಲಭ್ಯಗಳನ್ನು ಘೋಷಿಸಿದ್ದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ,ಎಸ್ ಯಡಿಯೂರಪ್ಪನವರಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ, ಇದಕ್ಕೆ ಕಾರಣಿಭೂತರಾದ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್ ಷಡಕ್ಷರಿ ಮತ್ತು ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಚಿತ್ರದುರ್ಗ  ಜಿಲ್ಲಾ ನೌಕರರ ಪರವಾಗಿ ಗೌರವಪೂರ್ವಕ ಅಭಿನಂದನೆಯನ್ನು ಸಲ್ಲಿಸುವುದಾಗಿ  ಕೆ.ಮಂಜುನಾಥ್   ತಿಳಿಸಿದ್ದಾರೆ.

Leave a Reply

Your email address will not be published.