ಶಾಲಾ ಮುಖ್ಯವಾಹಿನಿಗೆ ತರಲು ಮನೆ-ಮನೆ ಸಮೀಕ್ಷೆ

ಮಾನ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಭಾರತ ಸಂವಿಧಾನದ ಕಲಂ 21(ಎ) ಪ್ರಕಾರ 6 ರಿಂದ 14 ವರ್ಷದ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ. ಆದ್ದರಿಂದ ನಗರ ಸ್ಥಳೀಯ ಸಂಸ್ಥೆಗಳು 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಶಾಲಾ ಮುಖ್ಯವಾಹಿನಿಗೆ ತರಲು ಮನೆ-ಮನೆ ಸಮೀಕ್ಷೆ ಕೈಗೊಳ್ಳಲು ಸೂಚಿಸಿರುವುದರಿಂದ ಪಟ್ಟಣ ಪಂಚಾಯಿತಿ ಕಛೇರಿ ಸಿಬ್ಬಂದಿಗಳು ಹಾಗೂ ವಾರ್ಡ್ ಬಿ.ಎಲ್.ಒ.ಗಳು ಮನೆ-ಮನೆ ಸಮೀಕ್ಷೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವ ಕಾರ್ಯಕ್ರಮಕ್ಕೆ ದಿನಾಂಕ:23.12.2020ರಂದು ವಾರ್ಡ್ ನಂ 01ರ ಗಣಪತಿ ದೇವಸ್ಥಾನದ ಹತ್ತಿರ ಮಾನ್ಯ ಅಧ್ಯಕ್ಷರಾದ ಶ್ರೀ ಆರ್.ಎ.ಅಶೋಕ್ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾನ್ಯ ಉಪಾಧ್ಯಕ್ಷರಾದ ಶ್ರೀ ಕೆ.ಸಿ.ರಮೇಶ್ರವರು ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀಮತಿ ನಾಗರತ್ನ.ಹೆಚ್.ಆರ್.ವೇದಮೂರ್ತಿ, ಶ್ರೀ ಪಿ.ಆರ್.ಮಲ್ಲಿಕಾರ್ಜುನ, ಡಿ.ಎಸ್.ವಿಜಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಎ.ವಾಸಿಂ, ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ವಾರ್ಡ್ ಬಿ.ಎಲ್.ಒ ರವರು, ಹಾಗೂ ವಾರ್ಡ್ ನಂ 01 ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published.