BIGG NEWS : ಮನೆ ಕಟ್ಟೋರಿಗೆ ಸಚಿವ ‘ಮುರುಗೇಶ್ ನಿರಾಣಿ’ ಸಿಹಿಸುದ್ದಿ : ಏಪ್ರಿಲ್ ಅಂತ್ಯಕ್ಕೆ ಹೊಸ ‘ಮರಳು ನೀತಿ’ ಜಾರಿಗೆ

ಬಾಗಲಕೋಟೆ : ಜನ ಸಾಮಾನ್ಯರಿಗೆ ಕೈ ಗೆಟಕುವ ದರದಲ್ಲಿ ಮರಳು ಪೂರೈಸುವ ನಿಟ್ಟಿನಲ್ಲಿ ಇದೇ ಏಪ್ರಿಲ್ ತಿಂಗಳ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮರಳು ದರವನ್ನು ಪ್ರತಿದಿನ ಬಂಗಾರ, ಬೆಳ್ಳಿ ದರ ಪ್ರಕಟಗೊಂಡಂತೆ ಪ್ರತಿ ವಾರಕ್ಕೊಮ್ಮೆ ಮರಳಿನ ದರದ ಪಟ್ಟಿ ಆಯಾಯ ಜಿಲ್ಲೆಯಲ್ಲಿ ಪ್ರಕಟಿಸಲಾಗುವುದು. ಇದರಿಂದ ಸರಕಾರಕ್ಕೆ ಆದಾಯ ಹೆಚ್ಚುವುದರ ಜೊತೆಗೆ ಸಾರ್ವಜನಿಕರಿಗೆ ಮುಕ್ತವಾಗಿ ಮರಳು ದೊರೆಯಲಿದೆ ಎಂದು ಹೇಳಿದರು.

ಈ ಯೋಜನೆ ಅನ್ವಯ 10 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಪ್ರತಿ ಟನ್‍ಗೆ 100 ರೂ.ಗಳಿಗೆ ಆಯಾ ಭಾಗದ ಗ್ರಾಮ ಪಂಚಾಯತಿ, ನಗರಸಭೆಯ ಕಟ್ಟಡ ಅನುಮತಿಯಲ್ಲಿ ತೋರಿಸಿದಂತೆ ನಿಗದಿತ ಮರಳು ಪೂರೈಸಲಾಗುವುದು ಎಂದು ತಿಳಿಸಿದರು. ಮುಂದುವರೆದ ಮಾತನಾಡಿದ ಅವರು ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೌಕರರಿಗೂ ಸಮವಸ್ತ್ರ, ವಾಕಿಟಾಕಿ ಪೂರೈಸಲಾಗುತ್ತಿದೆ. ನಿವೃತ್ತ ಯೋಧರನ್ನು ಈ ಕಾರ್ಯಕ್ಕೆ ನೇಮಿಸಿಕೊಳ್ಳಲಾಗುತ್ತಿದೆ. ಇದರಿಂದ ಅಕ್ರಮ ಮರಳು ತಡೆಗೆ ಅನುಕೂಲವಾಗಲಿದೆ ಎಂದರು.

Leave a Reply

Your email address will not be published.