ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ ಬಳಿಕ, ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಇಂತಹ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಣೆಗೂ ಕೂಡ ಆರಂಭಗೊಂಡಿದೆ. ಇದೀಗ ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ 5 ಲಕ್ಷ ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರನ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಣೆ ನಡೆಯುತ್ತಿದೆ. ದೇಶಾದ್ಯಂತ ಅನೇಕರು ದೇಣಿಗೆ ನೀಡುತ್ತಿದ್ದಾರೆ. ರಾಜ್ಯದಿಂದಲೂ ದೇಣಿಗೆಯನ್ನು ಅನೇಕರು ನೀಡಿದ್ದಾರೆ. ಈ ನಡುವೆ ರಾಮಮಂದಿರ ನಿರ್ಮಾಣಕ್ಕೆ ಇಂದಿನಿಂದ ದೇಣಿಗೆ ಪಡೆಯಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.