ನಿತ್ಯವಾಣಿ, ಚಿತ್ರದುರ್ಗ,(ಅ.28) : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಕೊಡುಗೆಯಾಗಿ ಕರ್ನಾಟಕ ರಾಜ್ಯ ಸರ್ಕಾರದಿಂದ ಶೇ 3% ತುಟ್ಟಿಭತ್ಯೆ ಬಿಡುಗಡೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇದ್ದ ತುಟ್ಟಿಭತ್ಯೆ ಯನ್ನು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರಿ ನೌಕರರಿಗೆ ಶೇಕಡ 3ರಷ್ಟು ತುಟ್ಟಿಭತ್ಯೆಯನ್ನು ದಿನಾಂಕ 01.07.2021 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿರುತ್ತದೆ.
ಸಂಘವು ಮನವಿ ಸಲ್ಲಿಸಿದ ಕೇವಲ 24 ಗಂಟೆಯೊಳಗಾಗಿ ಹಾಗೂ ಕೇಂದ್ರ ಸರ್ಕಾರ ಮಂಜೂರು ಮಾಡಿದ ತುಟ್ಟಿಭತ್ಯೆಗೆ ಸರಿಸಮಾನವಾಗಿ ತುಟ್ಟಿಭತ್ಯೆಯನ್ನು ಮಂಜೂರು ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶಡಕ್ಷರಿ ಅವರಿಗೆ ಹಾಗೂ ಈ ಕಾರ್ಯದಲ್ಲಿ ಶ್ರಮಿಸಿದ ಕೇಂದ್ರ ಸಂಘದ ಪದಾಧಿಕಾರಿಗಳಿಗೆ, ಈ ಕಾರ್ಯದಲ್ಲಿ ಶ್ರಮಿಸಿದ ಎಲ್ಲಾ ಹಂತದ ಅಧಿಕಾರಿ ನೌಕರರಿಗೆ ರಾಜ್ಯದ ಹಾಗೂ ಚಿತ್ರದುರ್ಗ ಜಿಲ್ಲೆಯ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಅನಂತಾನಂತ ಧನ್ಯವಾದಗಳನ್ನು ಚಿತ್ರದುರ್ಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಂಜುನಾಥ್ ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ