ಬೆಂಗಳೂರು : ಶನಿವಾರದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ
ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ . ದೇಶದಲ್ಲಿರುವ ಕರೋನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ 8 ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಯಾಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಅನವಶ್ಯಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ಬೀದರ್, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇದೇ ಶನಿವಾರದಿಂದ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಕೊರೋನಾ ನಿಯಂತ್ರಣಕ್ಕೆ ಪ್ರಧಾನಿ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸಲು ಕಠಿಣ ಕ್ರಮಗಳನ್ನು ಜಾರಿಗೆ ಮಾಡಲಾಗುವುದು. ದಂಡದ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿ ಜನರಲ್ಲಿ ಜಾಗೃತಿ ಮೂಡುವಂತೆ ಮಾಡಲಾಗುವುದು.
ಬಸ್ಗಳು ಓಡಾಡುತ್ತವೆ. ಜನರು ಓಡಾಡಬಾರದು. ಇದು ಪ್ರಾಯೋಗಿಕವಾಗಿ ಜಾರಿ ಮಾಡ್ತಿರುವುದು. ಜನರು ಸಹಕರಿಸಬೇಕು. ಇಲ್ಲದಿದ್ದರೆ ಪರಿಸ್ಥಿತಿ ಗಂಭೀರವಾಗುತ್ತೆ. ನಾವು ಕಠಿಣವಾಗಬೇಕಾಗುತ್ತೆ. ಮಾಸ್ಕ್ ಧರಿಸಬೇಕು, ಅಂತರ ಕಾಪಾಡಬೇಕು, ದೊಡ್ಡ ಪ್ರಮಾನದಲ್ಲಿ ಸಭೆ ಸಮಾರಂಭ ಮಾಡಬಾರದು. ನಾನು ಮೋದಿ ಅವರ ಜೊತೆಗೆ ಮಾತನಾಡುವಾಗ ಕರ್ನಾಟಕದ ಪರಿಸ್ಥಿತಿಯನ್ನು ಸವಿಸ್ತಾರವಾಗಿ ತಿಳಿಸಿ, ಮನವರಿಕೆ ಮಾಡಿಕೊಟ್ಟೆ. ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪರಿಸ್ಥಿತಿ ಉತ್ತಮ ಸ್ಥಿತಿಯಲ್ಲಿದೆ ಎಂದು ಹೇಳಿರುವುದಾಗಿ ತಿಳಿಸಿದರು.
ನಾವು ಲಾಕ್ಡೌನ್ ಮಾಡುತ್ತಿಲ್ಲ.ಅಂಥದ್ದು ಆಗಬಾರದು ಅಂದರೆ ಜನರು ಸಹಕರಿಸಬೇಕು. ಪ್ರಧಾನಿ ಕೊಟ್ಟ ಸಲಹೆಯನ್ನು ನಾವು ಅನುಷ್ಠಾನಕ್ಕೆ ತರ್ತಿದ್ದೀವಿ. ಮಾಸ್ಕ್ ಹಾಕದವರಿಗೆ 250 ದಂಡವನ್ನು ಬಿಗಿಮಾಡ್ತೀವಿ. ರಾಜ್ಯದ ಜನರು ಸಹಕಾರ ಕೊಟ್ಟರೆ, ಇದು ಹರಡುವುದನ್ನು ತಪ್ಪಿಸಬಹುದು. ಇದು ಕಂಟ್ರೋಲ್ಗೆ ಬರದಿದ್ರೆ ಇಡೀ ರಾಜ್ಯಕ್ಕೆ ವಿಸ್ತರಿಸಬೇಕಾಗುತ್ತೆ. ಕೊರೊನಾ ಕರ್ಫ್ಯೂ ಸಂದರ್ಭದಲ್ಲಿ ಎಲ್ಲ ಅಗತ್ಯ ಸೇವೆಗಳು ಇರುತ್ತವೆ ಎಂದು ಪುನರುಚ್ಚರಿಸಿದರು.
ದೇಶದಲ್ಲಿರುವ ಕರೋನ ಪರಿಸ್ಥಿತಿ ಕುರಿತು ಪಿಎಂ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಿದರು. ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ರು. ಈ ಸಂದರ್ಭದಲ್ಲಿ ರಾಜ್ಯಗಳ ರಾತ್ರಿ ನಿರ್ಬಂಧಕ್ಕೆ (ಕೊರೊನಾ ಕರ್ಫ್ಯೂ) ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು.
ರಾತ್ರಿ 9 ರಿಂದ ಇಲ್ಲವೇ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿ ಎಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲಿ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
# ಏ.11ರಿಂದ 14ರವರೆಗೆ ವ್ಯಾಕ್ಸಿನ್ ಉತ್ಸವ :
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ನಂತ್ರ ದೇಶವನ್ನುದ್ದೇಶಿಸಿ ಮಾತನಾಡ್ತಿರುವ ಪ್ರಧಾನಿ ಕೊರೊನಾ ಕಡಿವಾಣಕ್ಕೆ ಇರುವ ಅತ್ಯುತ್ತಮ ಮಾರ್ಗವೆಂದ್ರೆ ಅದು ವ್ಯಾಕ್ಸಿನ್ ತೆಗೆದುಕೊಳ್ಳೋದು. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ತೆಗೆದುಕೊಳ್ಳೊಣಾ ಎಂದರು.
ಇನ್ನು ಏಪ್ರಿಲ್ 11 ರಿಂದ 14 ರವರೆಗೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವ ನಡೆಸಲಾಗುತ್ತೆ. ಸಾಧ್ಯವಾದಷ್ಟು ಜನರಿಗೆ ಲಸಿಕೆ ಹಾಕಲು ಪ್ರಯತ್ನಿಸುತ್ತದೆ. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 100% ಲಸಿಕೆಯ ಗುರಿ ಹೊಂದೋಣ ಎಂದು ಪ್ರಧಾನಿ ಮೋದಿ ಹೇಳಿದರು.