ನಿತ್ಯವಾಣಿ ಚಿತ್ರದುರ್ಗ,(ಮೇ. 27) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಇಂಟೆಕ್ ವಿಭಾಗದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ನಂತರ ನೂತನ ರಾಜ್ಯ ಅಧ್ಯಕ್ಷರಾದ ಜಾಕಿರ್ ಹುಸೇನ್ ರವರು ಪತ್ರಿಕಾಗೋಷ್ಠಿಯನ್ನು ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡುತ್ತಾ, ಮೊದಲನೇದಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ರಾಷ್ಟ್ರ ವಿಭಾಗದ ಅಧ್ಯಕ್ಷರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ನಾನು ಕಾಂಗ್ರೆಸ್ ಪಕ್ಷದಲ್ಲಿ 20ವರ್ಷ ಪ್ರಾಮಾಣಿಕವಾಗಿ ದಕ್ಷತೆಯಿಂದ ಕೆಲಸ ಮಾಡಿದ್ದೇನೆ, ನನ್ನನ್ನು ಪಕ್ಷನಿಷ್ಠೆ ಯನ್ನು ಗಮನಿಸಿ ಎಂಟೆಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ, ನಾನು ಈ ಜವಾಬ್ದಾರಿಯನ್ನು ರಾಜ್ಯದ್ಯಂತ ಜಾತಿ ಭೇದ ಮರೆತು ಪಕ್ಷಕ್ಕೆ ಉತ್ತಮ ಕೆಲಸ ಮಾಡುವವರನ್ನು ಆಯ್ಕೆ ಮಾಡಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ, ಕೊರೋನ ಇಳಿಮುಖ ಕಂಡ ನಂತರ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್, ಹಿರಿಯ ನಾಯಕರುಗಳಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾಕ್ಟರ್ ಜಿ ಪರಮೇಶ್ವರ್ ಇವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುತ್ತೇನೆ ಎಂದು ಹೇಳಿದರು