ನಿತ್ಯವಾಣಿ,ಚಿತ್ರದುರ್ಗ ಡಿ.06 : ಕೆ ಆರ್ ಎಸ್ ಪಕ್ಷದ ವತಿಯಿಂದ 2023ರ ವಿಧಾನಸಭಾ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ಕೆ ಆರ್ ಎಸ್ ಪಕ್ಷದ ಜಿಲ್ಲಾ ಸಂಚಾಲಕರಾದ ಮಹೇಶ್ ರವರು ತಿಳಿಸಿದರು
ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು ಈಗಾಗಲೇ ರಾಜ್ಯದಲ್ಲಿ 60 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಇನ್ನುಳಿದ ಕ್ಷೇತ್ರಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂದು ತಿಳಿಸುದರು.