‘ಅಧಿಕಾರಿಗಳೇ.. ಈ ರೀತಿ ಹಿಂಸೆ ಯಾರಿಗೂ ಕೊಡಬೇಡಿ..’ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಕೆಎಸ್​ಆರ್​ಟಿಸಿ ನೌಕರ!

ಮಂಗಳೂರು: ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ನೌಕರರೊಬ್ಬರು ಕಿಡ್ನಿ ಮಾರಾಟಕ್ಕಿಟ್ಟ ಬೆನ್ನಿಗೇ ಸಂಸ್ಥೆಯ ಅಧಿಕಾರಿಗಳು ಹಾಗೂ ಅಣ್ಣನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಎಸ್​ಆರ್​ಟಿಸಿಯ ಚಾಲಕ ಕಂ ಭದ್ರತಾ ಸಿಬ್ಬಂದಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರು ಹೊರವಲಯದ ತೊಕ್ಕೊಟ್ಟು ರೈಲ್ವೇ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿ.ಸಿ.ರೋಡ್​ ಕೆಎಸ್​ಆರ್​ಟಿಸಿ ಡಿಪೋದ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲಕೃಷ್ಣ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ. ಆದರೂ ಸಂಸ್ಥೆ ಬಿಡುವುದಿಲ್ಲ’ ಎಂದು ಅವರು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

ಇನ್ನು ‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆಯೂ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯ ಪಡೆಯಬಾರದು’ ಎಂದು ಕೂಡ ಅವರು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.

Leave a Reply

Your email address will not be published.