ಪಶುವೈದ್ಯಕೀಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಸ್.ಹೂಲಗೇರಿ ಭೂಮಿಪೂಜೆ

ಲಿಂಗಸುಗೂರು: ಮಾವಿನಬಾವಿ, ಆಮದಿಹಾಳ ಗ್ರಾಮಗಳಲ್ಲಿ ಪಶುವೈದ್ಯಕೀಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಸ್.ಹೂಲಗೇರಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಆರ್‌ಐಡಿಎಫ್ ಟ್ರಾಂಚ್-24 (ಹೆಚ್ಚುವರಿ) ಯೋಜನೆಯಡಿ ತಲಾ 38 ಲಕ್ಷ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ವಿವಿಧ ಅಭಿವೃದ್ಧಿ ಕಾರ್ಯಕೈಗೊಳ್ಳುವ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಆದ್ಯತೆ ನೀಡುವುದಾಗಿ ಹೇಳಿದರು.

Leave a Reply

Your email address will not be published.