ನಿತ್ಯವಾಣಿ ಯಿಂದ ಸರ್ವರಿಗೂ ಮಕರ ಸಂಕ್ರಾಂತಿಯ  ಹಾರ್ದಿಕ ಶುಭಾಷಯಗಳು :: ಆಚರಣೆಯ ಬಗ್ಗೆ ಈ ಸುದ್ಧಿ

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

  • ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ“ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ ೧೪ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು.
  • ಈಗ ಉತ್ತರಾಯಣ ಡಿಸೆಂಬರ್ ೨೨ಕ್ಕೇ ಆದರೂ, ಹಿಂದಿನಂತೆಯೇ ಜನವರಿ ೧೪ ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ ಕತೆಯಲ್ಲಿ ಇಚ್ಚಾ ಮರಣಿಯಾದ. ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ.                                                                          ಆಚರಣೆ

    ಕರ್ನಾಟಕ

    • (ಕರ್ನಾಟಕದ ರೈತರಿಗೆ ಸುಗ್ಗಿ (ಸುಗ್ಗಿ) ಅಥವಾ ಸುಗ್ಗಿಯ ಹಬ್ಬ. )ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು (ಮಕ್ಕಳು ಮತ್ತು ಹದಿಹರೆಯದವರು) ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.

    (*ಕಬ್ಬು ಈ ಭಾಗಗಳಲ್ಲಿ ಪ್ರಧಾನ ಏಕೆಂದರೆ ಹಬ್ಬದ ಋತುವಿನ ಸುಗ್ಗಿಯ ಸೂಚಿಸುತ್ತದೆ. )ಕರ್ನಾಟಕದ ಕೆಲವು ಭಾಗಗಳಲ್ಲಿ, ಹೊಸದಾಗಿ ಮದುವೆಯಾದ ಮಹಿಳೆ ಯರು ತನ್ನ ಮದುವೆಯ ಮೊದಲ ವರ್ಷದಿಂದ ಐದು ವರ್ಷಗಳ ಕಾಲ ಬಾಳೆಹಣ್ಣುಗಳನ್ನು ಮುತ್ತೈದೆಯರಿಗೆ ಕೊಡುವ ಸಂಪ್ರದಾಯ ಇದೆ. ಬಾಳೆಹಣ್ಣುಗಳ ಸಂಖ್ಯೆಯನ್ನು ಪ್ರತಿವರ್ಷ ಐದರಿಂದ ಹೆಚ್ಚಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಸಂಪ್ರದಾಯವಿದೆ.

    (ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ“. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ.)

    • ಮಹಿಳೆಯರು ಗುಂಪು ಗುಂಪಾಗಿ ರಂಗೋಲಿಯನ್ನು ಬಿಡಿಸುವುದು ಸಂಕ್ರಾಂತಿಯ ಸಮಯದ ಮತ್ತೊಂದು ಜನಪ್ರಿಯ ಘಟನೆಯಾಗಿದೆ. (ದನಕರುಗಳನ್ನು ಸಿಂಗರಿಸುವುದು ಮತ್ತು ಮೆರವಣಿಗೆ ಮಾಡುವುದು ಇನ್ನೊಂದು ಧಾರ್ಮಿಕ ಪದ್ಧತಿಯಾಗಿದೆ. ಅವುಗಳನ್ನು “ಕಿಚ್ಚು ಹಾಯಿಸುವುದು” ಹಳ್ಳಿಗಳಲ್ಲಿ ಸಾಮಾನ್ಯವಾಗಿದೆ.)
    • ವಂದನೆಗಳು
    • ಸಂಪಾದಕರು-  ಎಸ್.ಟಿ. ನವೀನ್ ಕುಮಾರ್ , ಚಿತ್ರದುರ್ಗ,                  9901254020

Leave a Reply

Your email address will not be published.